Saturday, September 13, 2025

ʼಈ ವರ್ಷ ರಾಖಿ ಕಟ್ಟೋಕೆ ಆಗಲ್ವೋʼ ಡೆತ್‌ನೋಟ್‌ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮದುವೆಯಾಗಿ ಆರೇ ತಿಂಗಳಿಗೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಡನ ಮನೆಯವರು ನೀಡುತ್ತಿದ್ದ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಶ್ರೀವಿದ್ಯಾ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಕಾಲೇಜು ಉಪನ್ಯಾಸಕಿಯಾಗಿದ್ದರು. ಆರು ತಿಂಗಳ ಹಿಂದಷ್ಟೇ ರಾಂಬಾಬು ಎಂಬುವವರನ್ನು ಮದುವೆಯಾಗಿದ್ದರು.

ಮದುವೆಯಾಗಿ ತಿಂಗಳಿನಿಂದಲೇ ಗಂಡನ ಮನೆಯವರಿಂದ ಕಿರುಕುಳ ಶುರುವಾಗಿತ್ತು ಎಂದು ಶ್ರೀವಿದ್ಯಾ ಪತ್ರದಲ್ಲಿ ಬರೆದಿದ್ದಾರೆ. ರಾಂಬಾಬು ಕುಡಿದು ಮನೆಗೆ ಬರುತ್ತಿದ್ದ. ದೈಹಿಕ ಹಿಂಸೆ ನೀಡುತ್ತಿದ್ದ, ಮಾತಿನಲ್ಲಿ ನಿಂದಿಸುತ್ತಿದ್ದ. ತನ್ನನ್ನು ಅಪಹಾಸ್ಯ ಮಾಡುತ್ತಿದ್ದ. ಬೇರೆ ಮಹಿಳೆಯರ ಮುಂದೆ ತನ್ನನ್ನು ನಿಷ್ಪ್ರಯೋಜಕ ಎಂದು ಕರೆಯುತ್ತಿದ್ದ ಎಂದು ಆಕೆ ಬರೆದಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಮಹಿಳೆ ಈ ತಪ್ಪು ಹೆಜ್ಜೆ ಇಡಬೇಕಾಯಿತು.

ತನ್ನ ತಮ್ಮನಿಗಾಗಿ ಡೆತ್‌ನೋಟ್‌ನಲ್ಲಿ ಒಂದೆರಡು ಮಾತನ್ನು ಹೇಳಿದ್ದು, ಈ ವರ್ಷ ನಿನಗೆ ರಾಖಿ ಕಟ್ಟೋದಕ್ಕೆ ಆಗೋದಿಲ್ಲ ಎಂದು ಬರೆದಿದ್ದಾರೆ. ಪತ್ರ ಓದಿದ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.

ಇದನ್ನೂ ಓದಿ