Friday, August 12, 2022

Latest Posts

ಅಂಜುಮ್ ಖಾನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜಸ್ಥಾನ್ ರಾಯಲ್ಸ್ ಆಲ್​ರೌಂಡರ್ ಶಿವಂ ದುಬೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭಾರತೀಯ ಕ್ರಿಕೆಟ್ ತಂಡ ಮತ್ತು ರಾಜಸ್ಥಾನ್ ರಾಯಲ್ಸ್ ಪರ ಆಡುವ  ಆಲ್​ರೌಂಡರ್ ಶಿವಮ್ ದುಬೆ ಅವರು ತಮ್ಮ ಗರ್ಲ್​ಫ್ರೆಂಡ್​ ಅಂಜುಮ್ ಖಾನ್ ಜೊತೆ  ಮುಂಬೈಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದುವೆಯಾಗಿರುವುದಾಗಿ ಶಿವಂ ದುಬೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮದುವೆ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ  ‘ಪ್ರೀತಿಗಿಂತಲೂ ಹೆಚ್ಚಿನದಾದ ಪ್ರೀತಿಯಿಂದ ನಾವು ಪ್ರೀತಿಸಿದ್ದೇವೆ. ನಿರಂತರದೆಡೆ ನಮ್ಮ ಯಾನ ಇಲ್ಲಿಂದ ಆರಂಭವಾಗುತ್ತದೆ’ಎಂದು ಅಡಿಬರಹ ನೀಡಿ ಕೆಲವು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಅಭಿಮಾನಿಗಳಿಂದ ಲೈಕ್ಸ್, ಕಮೆಂಟ್ ಮಹಾಪುರವೇ ಹರಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss