Thursday, July 7, 2022

Latest Posts

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಎಂಎಸ್ ಧೋನಿ

ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ.   ವಿವಿಧ ಚಟುವಟಿಕೆಗಳ ಮೂಲಕ ರಜೆ ದಿನಗಳನ್ನು ಕಳೆಯುತ್ತಿದ್ದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಈ ಕುರಿತಂತೆ ಇನ್ಸ್ಟಾಗ್ರಾಂ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು, ತುಂಬಾ ತುಂಬಾ ಧನ್ಯವಾದಗಳು. ನೀವು ಮುಂದೆಯೂ ನನಗೆ ಬೆಂಬಲಿಸುತ್ತೀರಿ ಎಂದು ಭಾವಿಸಿರುವೆ. 1929 ಗಂಟೆಯ ನನ್ನ ಕ್ರಿಕೇಟ್ ಜೀವನಕ್ಕೆ ನಿವೃತ್ತಿಯನ್ನು ಪಡೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಭಾರತಕ್ಕೆ ಎರಡು ವಿಶ್ವಕಪ್ ತಂದುಕೊಟ್ಟ ಯಶಸ್ವಿ ನಾಯಕ ಧೋನಿ, ಐಪಿಎಲ್ ನಲ್ಲಿ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.
39 ವರ್ಷದ ಎಂಎಸ್ ಧೋನಿ 350 ಏಕದಿನ, 90 ಟೆಸ್ಟ್ ಹಾಗೂ 98 ಟಿ20 ಪಂದ್ಯಗಳನ್ನಾಡಿದ್ದರು. ಏಕದಿನ ಕ್ರಿಕೆಟ್‌ನಲ್ಲಿ 10 ಶತಕ ಸೇರಿದಂತೆ 10,773 ರನ್ ಪೇರಿಸಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ 6 ಶತಕ ಸೇರಿದಂತೆ 4876 ರನ್ ಗಳಿಸಿದ್ದರೆ, ಚುಟುಕು ಕ್ರಿಕೆಟ್‌ನಲ್ಲಿ 1617 ರನ್ ಬಾರಿಸಿದ್ದರು.
2019 ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯ ಅವರು ಆಡಿದ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿದೆ.
ಧೋನಿ 2007 ರ ಟಿ 20 ವಿಶ್ವಕಪ್, 50 ಓವರ್‌ಗಳ ವಿಶ್ವಕಪ್ 2011 ಮತ್ತು 2013 ಐಸಿಸಿ ಚಾಂಪಿಯನ್ಸ್ ಟ್ರೋಫಿ ಎಂಬ ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದಿರುವ ಅತ್ಯಂತ ಯಶಸ್ವಿ ನಾಯಕರಾಗಿದ್ದರು.
2015 ರ ಆರಂಭದಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು .

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss