ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಂತಾರಾಜ್ಯ ಗಡಿ ನಿರ್ಬಂಧ ಸಡಿಲ: ಕರ್ನಾಟಕ ಸಿಎಂ ಅನ್ನು ಒತ್ತಾಯಿಸಿದ ಶ್ರೀಕಾಂತ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ ಕೊರೋನಾ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಿದೆ.
ಇದರ ಜೊತೆಗೆ ಸೋಮವಾರದಿಂದ ಕೇವಲ ಐದೇ ಗಡಿಗಳು ಮಾತ್ರವೇ ಸಂಚಾರಕ್ಕೆ ತೆರೆದಿರಲಿವೆ. ಈಗಾಗಲೇ ಉಳಿದ ಗಡಿಗಳನ್ನು ಬಂದ್ ಮಾಡುವ ಕಾರ್ಯವನ್ನು ಜಿಲ್ಲಾಡಳಿತ ಕೈಗೊಂಡಿದೆ. ಈ ಹಿನ್ನೆಲೆ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾ. ಕೆ. ಶ್ರೀಕಾಂತ್ ಟ್ವೀಟರ್ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದು, ಕಾಸರಗೋಡಿನ ಜನರು ದೈನಂದಿನ ಜೀವನಕ್ಕಾಗಿ ದಕ್ಷಿಣ ಕನ್ನಡದ ವಿವಿಧ ಪಟ್ಟಣಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಈ ಹಿನ್ನೆಲೆ ಜನರ ಮುಕ್ತ ಸಂಚಾರಕ್ಕೆ ಅನುವುಮಾಡಿಕೊಡುವಂತೆ ವಿನಂತಿಸಿದ್ದಾರೆ.
ಈಗಾಗಲೇ ದಕ ಜಿಲ್ಲಾಡಳಿತ ಮಂಗಳೂರು ಸಂಪರ್ಕಿಸುವ ತಲಪಾಡಿ, ಸಾರಡ್ಕ, ಸುಳ್ಯದ ಜಾಲ್ಸೂರು, ಪುತ್ತೂರಿನ ನೆಟ್ಟಣಿಗೆ ಮುಡ್ನೂರು, ಮೇಣಾಲ ಗಡಿಗಳಲ್ಲಿ ಮಾತ್ರ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಉಳಿದಂತೆ ಇತರ ಗಡಿಗಳ ಮೂಲಕ ಸಂಚಾರಕ್ಕೆ ನಿರ್ಬಂಧ ವಿಧಿಸಿದೆ. ಇದರಿಂದ ಕೆಲಸ, ವೈದ್ಯಕೀಯ ಚಿಕಿತ್ಸೆ, ಶಿಕ್ಷಣ ಇತ್ಯಾದಿ ಕಾರ್ಯಗಳಿಗೆ ದಕ್ಷಿಣ ಕನ್ನಡ ಸಂಚರಿಸುವವರಿಗೆ ಸಮಸ್ಯೆಯಾಗಲಿದ್ದು, ಈ ಕಾರಣದಿಂದ ಅಂತಾರಾಜ್ಯ ಗಡಿಯಲ್ಲಿ ಪ್ರಯಾಣ ನಿರ್ಬಂಧವನ್ನು ಸಡಿಲಗೊಳಿಸುವಂತೆ ಕೆ. ಶ್ರೀಕಾಂತ್ ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss