Wednesday, August 17, 2022

Latest Posts

ಅಂತಾರಾಜ್ಯ ಮುಕ್ತ ಪ್ರಯಾಣ ಆಗ್ರಹಿಸಿ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷರಿಂದ ಕೇರಳ ಹೈಕೋರ್ಟ್ ಗೆ ಅರ್ಜಿ

ಕಾಸರಗೋಡು: ಕಾಸರಗೋಡು ಜಿಲ್ಲೆಯವರಿಗೆ ಕರ್ನಾಟಕ ಅಂತಾರಾಜ್ಯ ಪ್ರಯಾಣಕ್ಕೆ ತಡೆಯೊಡ್ಡುವ ಕೇರಳ ಸರಕಾರದ ಧೋರಣೆ ವಿರುದ್ಧ ಹಾಗೂ ರಸ್ತೆ ತಡೆಗಟ್ಟಿ ಸಾರಿಗೆ ಸಂಚಾರವನ್ನು ಬಂದ್ ಮಾಡಿರುವ ಬಗ್ಗೆ ಸರಕಾರದ ನಡೆಯನ್ನು ಪ್ರಶ್ನಿಸಿ ಕೇರಳ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗದೆ.
ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ , ಬಿಜೆಪಿ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಕೆ.ಶ್ರೀಕಾಂತ್ ಅವರು ಕಾಸರಗೋಡು ಜಿಲ್ಲೆಯ ಜನರ ಪರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 10 ಸೋಮವಾರದಂದು ಕೇರಳ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಮುಂದೆ ಈ ಅರ್ಜಿ ವಿಚಾರಣೆಗೆ ಬರಲಿದೆ.
ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕೆಯ ಅಂಗವಾಗಿ ಕಳೆದ ಕೆಲವು ತಿಂಗಳುಗಳಿಂದ ಕಾಸರಗೋಡು – ಮಂಗಳೂರು ಸೇರಿದಂತೆ ಎಲ್ಲ ಅಂತಾರಾಜ್ಯ ರಸ್ತೆಗಳನ್ನು ಕೇರಳ ಸರಕಾರ ಮತ್ತು ಕಾಸರಗೋಡು ಜಿಲ್ಲಾಡಳಿತ ಬಂದ್ ಮಾಡಿದೆ. ಆದರೂ ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಅಂತಾರಾಜ್ಯ ಪ್ರಯಾಣದಿಂದಾಗಿ ಕೊರೋನಾ ಹೆಚ್ಚುತ್ತಿದೆ ಎಂಬುದು ಅವೈಜ್ಞಾನಿಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಅವರು ‘ಹೊಸ ದಿಗಂತ’ದೊಂದಿಗೆ ಮಾತನಾಡುತ್ತಾ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!