Monday, August 15, 2022

Latest Posts

ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಕೇಂದ್ರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ!

ನವದೆಹಲಿ: ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ ವೇಳೆ RT -PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಆರೋಗ್ಯ ಇಲಾಖೆಗೆ ನೀಡಿದರೆ ಅಂತಹ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗುತ್ತದೆ.ಪ್ರಯಾಣಕ್ಕೆ 96 ಗಂಟೆ ಮೊದಲು ಕೋವಿಡ್ ತಪಾಸಣೆ ಮಾಡಿಸಿ ಅದರಲ್ಲಿ ನೆಗೆಟಿವ್ ಎಂದು ಬಂದಿರಬೇಕು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇತ್ತೀಚೆಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಈ ಕುರಿತಾಗಿ ತಿಳಿಸಿದೆ.
ಈ ಪರೀಕ್ಷೆ ಮಾಡದವರು 14 ದಿನಗಳವರೆಗೆ ಕಡ್ಡಾಯವಾಗಿ ಕ್ವಾರಂಟೈನ್ ಗೆ ಒಳಗಾಗಬೇಕಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಪರಿಷ್ಕೃತ ಮಾರ್ಗಸೂಚಿ ಆಗಸ್ಟ್ 8ರಿಂದ ಜಾರಿಗೆ ಬರಲಿದೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ ಕೆಲ ಅಂಶಗಳನ್ನೂ ಸಹ ಪ್ರಕಟಿಸಲಾಗಿದೆ

  • ಪ್ರಯಾಣಿಕರು ಪ್ರಯಾಣಕ್ಕೂ ಮುನ್ನ 72 ಗಂಟೆಗಳ ಮುನ್ನವೇ ಸ್ವಘೋಷಿತ ಅರ್ಜಿಯನ್ನು ಭರ್ತಿ ಮಾಡಬೇಕು.
  •  ಅರ್ಜಿ ಭರ್ತಿ ಬಳಿಕ 14 ದಿನಗಳ ಕಾಲ ಕಡ್ಡಾಯವವಾಗಿ ಕ್ವಾರಂಟೈನ್ ಗೆ ಒಳಗಾಗುವ ಬಗ್ಗೆ ದೃಢಪಡಿಸಬೇಕು
  • ಪ್ರಯಾಣ ಪೂರ್ಣಗೊಳಿಸಿದ ನಂತರ ನೆಗೆಟಿವ್ ವರದಿಯನ್ನು ತೋರಿಸಿದರೆ ಸಾಂಸ್ಥಿಕ ಕ್ವಾರಂಟೈನ್‍ನಿಂದ ವಿನಾಯಿತಿ ಪಡೆಯಲು ಅವಕಾಶವಿದೆ.
  • ಸ್ಕ್ರೀನಿಂಗ್ ವೇಳೆ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಕಂಡುಬಂದರೆ ತಕ್ಷಣ ಅಂಥ ಪ್ರಯಾಣಿಕರನ್ನು ಪ್ರತ್ಯೇಕಿಸಿ ಶಿಷ್ಟಾಚಾರದ ಪ್ರಕಾರ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss