Tuesday, June 28, 2022

Latest Posts

ಅಂತಾರಾಷ್ಟ್ರೀಯ ಸಿನಿಮಾ ಉತ್ಸವಕ್ಕೆ ಚಾಲನೆ: ಮುಖ್ಯ ಅತಿಥಿಯಾಗಿ ಕಿಚ್ಚ ಸುದೀಪ್​ ಭಾಗಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಗೋವಾದ ಪಣಜಿಯಲ್ಲಿ ಇಂದಿನಿಂದ 51ನೇ ಅಂತಾರಾಷ್ಟ್ರೀಯ ಸಿನಿಮಾ ಉತ್ಸವ ಆರಂಭಗೊಂಡಿದ್ದು, ನಟ ಕಿಚ್ಚ ಸುದೀಪ್​ ಮುಖ್ಯ ಅತಿಥಿಯಾಗಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಪಣಜಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ಜನವರಿ 16ರಿಂದ 24ರವರಗೆ ನಡೆಯಲಿರುವ ಈ ಉತ್ಸವದಲ್ಲಿ 119 ಸಿನಿಮಾಗಳು ಪ್ರಸಾರಗೊಳ್ಳಲಿವೆ. ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​, ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇತ್ತ ನಟ ಸುದೀಪ್​ ಪ್ರತಿಷ್ಠಿತ ಅಂತಾರಾಷ್ಟ್ರೀಯ ಫಿಲ್ಮ್​ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss