Thursday, January 28, 2021

Latest Posts

ಅಂತೂ ಫಿಕ್ಸ್ ಆಯಿತು ‘ರಾಬರ್ಟ್’ ಸಿನಿಮಾದ ರಿಲೀಸ್ ಡೇಟ್!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ದಿಂದ ಮನೆಯಲ್ಲಿ ಇದ್ದು, ಸಿನಿಮಾದಿಂದ ದೂರು ಉಳಿದ ಅಭಿಮಾನಿಗಳಿಗೆ ಅಂತೂ ಖುಷಿಪಡುವಂತಹ ಒಂದು ಸುದ್ದಿ ಹೊರಬಿದ್ದಿದೆ. ಲಾಕ್‍ಡೌನ್ ಮುಗಿದು ಇಷ್ಟು ದಿನಗಳಾದರೂ ಇನ್ನು ಸ್ಟಾರ್ ನಟರ ಚಿತ್ರಗಳ ಬಿಡುಗಡೆ ಆಗುತ್ತಿಲ್ಲ ಎನ್ನುವಾಗ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಮಾರ್ಚ್ 11ಕ್ಕೆ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ಬಿಡುಗಡೆಯಾಗಲಿದೆ.
ಈ ಕುರಿತು ಸ್ವತಃ ದರ್ಶನ್ ಘೋಷಿಸಿದ್ದು, ಚಿತ್ರತಂಡದವರು ಸೋಷಿಯಲ್ ಮೀಡಿಯಾ ಮೂಲಕ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಲಾಗಿರುವ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ರಾಬರ್ಟ್ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ಆಶಾ ಭಟ್ ಅಭಿನಯಿಸಿದ್ದು, ಮಿಕ್ಕಂತೆ ವಿನೋದ್ ಪ್ರಭಾಕರ್, ಜಗಪತಿ ಬಾಬು ಸೇರಿದಂತೆ ಹಲವರು ನಟಿಸಿದ್ದಾರೆ. ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವುದು ತರುಣ್ ಸುಧೀರ್. ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!