Monday, August 8, 2022

Latest Posts

ಅಂಫಾನ್ ಹಾವಳಿ: ಪಶ್ಚಿಮ ಬಂಗಾಲ ಹಾಗೂ ಒಡಿಶಾ ಜನತೆಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ

ನವದೆಹಲಿ: ಅಂಫಾನ್ ಚಂಡಮಾರುತದಿಂದ ತತ್ತರಿಸಿರುವ ಪಶ್ಚಿಮ ಬಂಗಾಲ ಹಾಗೂ ಒಡಿಶಾ ಜನತೆ ಪರವಾಗಿ ನಿಂತಿರುವ ಪ್ರಧಾನಿ ನರೇಂದ್ರ ಮೋದಿ, ಜನತೆಗೆ ಯಾವುದೇ ಭಯ ಬೇಡ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುತ್ತಿದೆ. ದೇಶದ ಜನತೆಯೇ ನಿಮ್ಮ ಜೊತೆಗಿದ್ದಾರೆ, ಈ ಆತಂಕವನ್ನು ಜೊತೆಯಾಗಿ ಎದುರಿಸೋಣಾ ಎಂದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, ಈ ರಾಜ್ಯಗಳಲ್ಲಿ ಆಗಿರುವ ಹಾನಿಗಳ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.
ಒಡಿಶಾದಲ್ಲಿ ಚಂಡಮಾರುತದ ಅಬ್ಬರವನ್ನು ಸಮರ್ಥವಾಗಿ ಎದುರಿಸಿರುವ ಜನರನ್ನು ನಾನು ಶ್ಲಾಘಿಸುತ್ತೇನೆ. ಪರಿಸ್ಥಿತಿ ಆದಷ್ಟು ಬೇಗ ಸಹಜ ಸ್ಥಿತಿಗೆ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದೂ ಪ್ರಧಾನಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss