Sunday, June 26, 2022

Latest Posts

ಅಕ್ಟೋಬರ್ 30ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ

ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಅ.12 ರಿಂದ 30 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.

ಈ ಕುರಿತು ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮಗಳನ್ನು ಸಹ ಸ್ಥಗಿತಗೊಳಿಸಲು ಆದೇಶಿಸಲಾಗಿದೆ ಎಂದಿದ್ದಾರೆ.

ಹಲವಾರು ಶಿಕ್ಷಕರು ಕೊರೋನಾ ಸೋಂಕಿಗೆ ಒಳಗಾಗಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ. ಆದ್ದರಿಂದ ಶಾಲೆಗಳಿಗೆ ಅ.12 ರ ಸೋಮವಾರದಿಂದ ಅ.30 ರ ಶುಕ್ರವಾರದವರೆಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ಇನ್ನು ಅ.31 ಹಾಗೂ ನ.1 ರಂದು ಶನಿವಾರ, ಭಾನುವಾರವಾದ್ದರಿಂದ ರಜೆ ಇರಲಿದ್ದು, ದಸರಾ ರಜೆ ಮುಗಿದ ಬಳಿಕ ಅಂದರೆ, ನ.2 ರ ನಂತರ ಶಾಲೆಗಳು ಪುನಾರಂಭಗೊಳ್ಳುವ ಸಾಧ್ಯತೆ ಇದೆ.

ಇದೇ ಸಂದರ್ಭದಲ್ಲಿ ನನ್ನ ಪ್ರೀತಿಯ ಎಲ್ಲ ಶಾಲಾ ವಿದ್ಯಾರ್ಥಿಗಳು ಮತ್ರು ಶಿಕ್ಷಕ ವರ್ಗದವರಿಗೆಲ್ಲರಿಗೂ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯಗಳನ್ನೂ ಸಿಎಂ ಯಡಿಯೂರಪ್ಪ ಕೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss