Tuesday, July 5, 2022

Latest Posts

ಅಕ್ರಮ ಆಸ್ತಿಗಳಿಕೆ ಆರೋಪ: ಕೆಎಎಸ್ ಅಧಿಕಾರಿ ಸುಧಾ ಅಮಾನತು

ಹೊಸ ದಿಗಂತ ಆನ್ ಲೈ್ನ್ ಡೆಸ್ಕ್:

ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ವಿರುದ್ಧ ಸರ್ಕಾರ ಕಟು ನಿರ್ಧಾರ ಕೈಗೊಂಡಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಭೂ ಒತ್ತುವರಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ ಇತ್ತೀಚೆಗೆ ಎರಡು ಬಾರಿ ಎಸಿಬಿ ದಾಳಿ ಮಾಡಿತ್ತು, ಚರ ಮತ್ತು ಸ್ಥಿರಾಸ್ತಿಗಳು ಪತ್ತೆಯಾಗಿದ್ದು, ಇವುಗಳ ಬಗ್ಗೆ ತನಿಖೆ ನಡೆಸಲಾಗಿತ್ತು.

ಸುಧಾ ಅವರ ಅಕ್ರಮ ಆಸ್ತಿ ಗಳಿಕೆ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗೆ ವಹಿಸುವ ಬಗ್ಗೆ ಎಸಿಬಿ ಅಧಿಕಾರಿಗಳು ಚಿಂತನೆ ನಡೆಸಿದ್ದರು.

ಈ ನಡುವೆ ತನಿಖೆಯ ವೇಳೆ  ಧಾರವಾಹಿ ಮತ್ತು ಸಿನಿಮಾಗಳಲ್ಲಿ ಸುಧಾ ಭಾರೀ ಪ್ರಮಾಣದಲ್ಲಿ ಹಣ ಹೂಡಿಕೆ ಮಾಡಿರುವ ಅಂಶ ಬೆಳಕಿಗೆ ಬಂದಿದೆ. ಮತ್ತು ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ 200ಕ್ಕೂಹೆಚ್ಚು ದಾಖಲೆ ಪತ್ರಗಳು, 50ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳ ವಿವರ ಲಭ್ಯವಾಗಿದೆ. 50 ಕೋಟಿ ರೂ. ಗೂ ಹೆಚ್ಚು ಬೇನಾಮಿ ಆಸ್ತಿ ಪತ್ತೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss