Wednesday, August 17, 2022

Latest Posts

ಅಕ್ರಮ ಆಸ್ತಿ ಪತ್ತೆ: ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾದ ಹಿನ್ನಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿದೆ.
ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ.
ಜುಲೈ.5ರಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 87.54 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿತ್ತು.
ದಾಳಿಯ ಬಳಿಕ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ಸೂಚಿಸಿತ್ತು. ಆದ್ರೇ ಬಕ್ರೀದ್ ಹಬ್ಬದ ಬಳಿಕ ವಿಚಾರಣೆಗೆ ಹಾಜರಾಗೋದಾಗಿ ತಿಳಿಸಿದ್ದರು. ಇದೀಗ ಹಬ್ಬದ ಬಳಿಕ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!