ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಕ್ರಮ ಕಸಾಯಿಖಾನೆಗಳ ತೆರವಿಗೆ ಆಗ್ರಹಿಸಿ ಬಿಜೆಪಿ ದಾವಣಗೆರೆ ದಕ್ಷಿಣ ಯುವ ಮೋರ್ಚಾದಿಂದ ಪ್ರತಿಭಟನೆ

ಹೊಸ ದಿಗಂತ ವರದಿ, ದಾವಣಗೆರೆ:

ನಗರದಲ್ಲಿನ ಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ದಾವಣಗೆರೆ ದಕ್ಷಿಣ ಯುವ ಮೋರ್ಚಾ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಮಹಾನಗರ ಪಾಲಿಕೆ ಎದುರು ಜಮಾಯಿಸಿದ್ದ ಪಕ್ಷದ ಯುವ ಮುಖಂಡರು, ಕಾರ್ಯಕರ್ತರು ಗೋಹತ್ಯೆ ನಿಷೇಧಕ್ಕೆ ಒತ್ತಾಯಿಸಿ ಘೋಷಣೆ ಕೂಗಿದರು. ನಂತರ ಪಾಲಿಕೆ ಆಡಳಿತಕ್ಕೆ ಮನವಿಪತ್ರ ಸಲ್ಲಿಸಿದರು.
ದಾವಣಗೆರೆ ನಗರದಲ್ಲಿ ಅನಧಿಕೃತವಾಗಿ ಅನೇಕ ಕಸಾಯಿಖಾನೆಗಳು ಕಾರ್ಯ ನಿರ್ವಹಿಸುತ್ತಿವೆ. ಯಾವುದೇ ಪರವಾನಿಗೆ ಇಲ್ಲದಿದ್ದರೂ ಬಾಷಾ ನಗರದ ಮುಖ್ಯರಸ್ತೆ, ಆಜಾದ್ ನಗರ, ಹಳೇ ಬೇತೂರು ರಸ್ತೆ, ಕೆಟಿಜೆ ನಗರ ಮತ್ತಿತರೆ ಪ್ರದೇಶಗಳಲ್ಲಿನ ಅಕ್ರಮ ಕಸಾಯಿಖಾನೆಗಳಲ್ಲಿ ಗೋವಧೆ ಮಾಡಲಾಗುತ್ತಿದೆ. ಇದರಿಂದಾಗಿ ಹಿಂದೂ ಭಾವನೆಗಳಿಗೆ ಧಕ್ಕೆಯಾಗುತ್ತಿದ್ದು, ಕೂಡಲೇ ಅಂತಹ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತೀವ್ರಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಯುವ ಮೋರ್ಚಾ ದಾವಣಗೆರೆ ದಕ್ಷಿಣ ಅಧ್ಯಕ್ಷ, ಪಾಲಿಕೆ ಸದಸ್ಯ ರಾಕೇಶ್ ಜಾಧವ್, ಪ್ರಧಾನ ಕಾರ್ಯದರ್ಶಿ ರಾಜು ನೀಲಗುಂದ, ಖಜಾಂಚಿ ಗಣೇಶ, ಉಪಾಧ್ಯಕ್ಷ ಫೂಲಯ್ಯ, ಯುವ ಮುಖಂಡರಾದ ಹೆಚ್.ಬಿ.ನವೀನ ಕುಮಾರ, ಕಿರಣ, ಸ್ಟಾರ್ ಮಾಲತೇಶ್, ಅಭಿಷೇಕ್, ಪ್ರವೀಣ ಜಾಧವ್, ಮಂಜು ಜಾಧವ್, ಅನಿಲ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss