Thursday, July 7, 2022

Latest Posts

ಅಕ್ರಮ ಗೋಸಾಗಾಟ ತಡೆಗೆ ಪೊಲೀಸ್ ಇಲಾಖೆ ದಿಟ್ಟ ಹೆಜ್ಜೆ: 32 ಚೆಕ್ ಪೋಸ್ಟ್ ರಚಿಸಲು ಠಾಣಾಧಿಕಾರಿಗಳಿಗೆ ಕಮಿಷನರ್ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್‌ಗಳನ್ನು ರಚಿಸುವ ಮೂಲಕ ಅಕ್ರಮ ಚಟುವಟಿಕೆಗಳನ್ನು ಮಟ್ಟಹಾಕಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ, ಅನೈತಿಕ ಪೊಲೀಸ್‌ಗಿರಿ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಠಾಣಾಧಿಕಾರಿಗಳು ಮುತುವರ್ಜಿ ವಹಿಸಬೆರಕು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಆಯಾ ಠಾಣಾ ವ್ಯಾಪ್ತಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆದು ಕಡ್ಡಾಯವಾಗಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಯಾವುದೇ ಕಾರಣಕ್ಕೂ ಸಿಬ್ಬಂದಿ ಕೊರತೆಯ ನೆಪ ಹೇಳುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss