Sunday, December 3, 2023

Latest Posts

ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಪ್ರಕರಣ: ಹೆಚ್.ಡಿ.ಕುಮಾರಸ್ವಾಮಿಗೆ ಬೆಸ್ಕಾಂ ವಿಧಿಸಿದ ದಂಡವೆಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೀಪಾವಳಿ ಹಬ್ಬದ ದಿಂದ ಜೆ.ಪಿ.ನಗರದ ತಮ್ಮ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಬೆಸ್ಕಾಂ ಇಲಾಖೆ ಮಾಜಿ ಸಿಎಂ ಕುಮರಸ್ವಾಮಿಯವರಿಗೆ 68 ಸಾವಿರ ರೂಪಾಯಿ ದಂಡ ವಿಧಿಸಿದೆ. ದಂಡದ ಮೊತ್ತವನ್ನು 7 ದಿನಗಳ ಒಳಗಾಗಿ ಪಾವತಿ ಮಾಡುವಂತೆ ಸೂಚಿಸಿದೆ.

ವಿದ್ಯುತ್ ಕಳ್ಳತನ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ವಿರುದ್ಧ ಎಫ್ ಐ ಆರ್ ಕೂಡ ದಾಖಲಾಗಿತ್ತು.

ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಕುಮಾರಸ್ವಾಮಿಯವರ ಜೆ.ಪಿ.ನಗರದ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ದಂಡ ವಿಧಿಸುವುದಾಗಿ ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದರು.

ಇದೀಗ ಬೆಸ್ಕಾಂ ಜಾಗೃತ ದಳದ ಡಿವೈಎಸ್ ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆಯ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ ಎಷ್ಟು ವಿದ್ಯುತ್ ಬಳಕೆ ಮಾಡಲಾಗಿದೆ ಎಂಬುದರ ಆಧಾರದ ಮೇಲೆ ಲೆಕ್ಕ ಮಾಡಲಾಗಿದ್ದು, ಎರಡು ದಿನ ಅಕ್ರಮವಾಗಿ ಬಳಕೆಯಾದ ವಿದ್ಯುತ್ ಗೆ ದಂಡ ವಿಧಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!