Tuesday, August 16, 2022

Latest Posts

ಅಡ್ಕಸ್ಥಳದಲ್ಲಿ ಎಣ್ಮಕಜೆ ಬಿಜೆಪಿ ನೇತೃತ್ವದಲ್ಲಿ ಅಂತಾರಾಜ್ಯ ಪಾಸ್ ಉಲ್ಲಂಘನಾ ಆಂದೋಲನ

 ಕಾಸರಗೋಡು: ಅಂತಾರಾಜ್ಯ ಪ್ರಯಾಣಕ್ಕೆ ಯಾವುದೇ ಅನುಮತಿ ಅಗತ್ಯವಿಲ್ಲ ಎಂಬ ಕೇಂದ್ರ ಸರಕಾರದ ಸ್ಪಷ್ಟ ನಿರ್ದೇಶನವಿದ್ದರೂ ಕೇರಳ ಸರಕಾರ ಅದರ ವಿರುದ್ಧವಾಗಿ ಕರ್ನಾಟಕಕ್ಕೆ ಹೋಗಲು ಪಾಸ್ ಮೂಲಕ ನಿಯಂತ್ರಣ ಹೇರುವ ನೀತಿಯನ್ನು ಖಂಡಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಪಾಸ್ ಉಲ್ಲಂಘನಾ ಆಂದೋಲನವು ಮಂಗಳವಾರ ಜಿಲ್ಲೆಯ ವಿವಿಧೆಡೆ ಯಶಸ್ವಿಯಾಗಿ ನಡೆದಿದೆ.
ಇದರ ಅಂಗವಾಗಿ ಪೆರ್ಲ ಸಮೀಪದ ಅಡ್ಕಸ್ಥಳದಲ್ಲಿ ಬಿಜೆಪಿ ಎಣ್ಮಕಜೆ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಜರಗಿದ ಪ್ರತಿಭಟನೆಯನ್ನು ಪಕ್ಷದ ನೇತಾರ ಕೋಳಾರು
ಸತೀಶ್ಚಂದ್ರ ಭಂಡಾರಿ ಉದ್ಘಾಟಿಸಿ ಮಾತನಾಡಿ, ಸಾರಡ್ಕ ಮೂಲಕ ಅಂತಾರಾಜ್ಯ ಸಂಚಾರಕ್ಕೆ ಮುಕ್ತ ಪ್ರವೇಶ ನಿಷೇಧಿಸಿರುವ ಕೇರಳ ರಾಜ್ಯ ಸರಕಾರದ ಜನ ವಿರೋಧಿ ನೀತಿಯಿಂದಾಗಿ ಈ ಭಾಗದ ಜನತೆ ಸಂಕಷ್ಟಕ್ಕೀಡಾಗಿದ್ದು ಜನಪರ ಧ್ವನಿಯಾಗಿ ಬಿಜೆಪಿ ಸದಾ ಹೋರಾಟ ನಡೆಸಲಿದೆ ಎಂದರು.
ಬಿಜೆಪಿ ಮುಖಂಡ ಉದಯ ಚೆಟ್ಟಿಯಾರ್ ಬಜಕೂಡ್ಲು ಪ್ರತಿಭಟನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷೆ ರೂಪವಾಣಿ ಆರ್.ಭಟ್, ಪುಷ್ಪಾ ಅಮೆಕ್ಕಳ, ಸವಿತಾ ಬಾಳಿಕೆ, ಹೇಮರಾಜ್ ಶೆಟ್ಟಿ ಮೊದಲಾದವರು ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಬದಿಯಡ್ಕ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು , ಅತೀ ಅಗತ್ಯ ಕಾರಣದ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು. ಈ ಮಧ್ಯೆ ಶೀಘ್ರ ಗಡಿ ಸಂಚಾರ ಮುಕ್ತಗೊಳಿಸದಿದ್ದರೆ ಬಿಜೆಪಿ ನೇತೃತ್ವದಲ್ಲಿ ಮುಂದೆ ಉಗ್ರ ಹೋರಾಟ ನಡೆಯಲಿದೆ ಎಂದು ಪಕ್ಷದ ಪದಾಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss