Wednesday, July 6, 2022

Latest Posts

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ಸೇವೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21ನೇ ಸಾಲಿಗೂ ಮುಂದುವರಿಸಿ ಸೋಮವಾರ ಆದೇಶ ಹೊರಡಿಸಿದೆ.

ಕೋವಿಡ್ ಸಮಯದಲ್ಲಿ ಪ್ರತಿಯೊಬ್ಬರಿಗೂ ಕೆಲಸ ಅನಿವಾರ್ಯವಾಗಿದ್ದರಿಂದ ಇನ್ನೊಂದು ಅವಧಿಗೆ ಅತಿಥಿ ಉಪನ್ಯಾಸಕರನ್ನು ಮುಂದುವರಿಸಲಾಗಿದೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರಿಗೆ ಕಳೆದ ವಾರವಷ್ಟೇ ಐದು ತಿಂಗಳ ಬಾಕಿ ವೇತನ ಪಾವತಿ ಮಾಡಿದ್ದ ಸರ್ಕಾರ ಇದೀಗ ಅವರ ಸೇವೆ ವರ್ಷದ ಮಟ್ಟಿಗೆ ಮುಂದುವರಿಸಿ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss