Tuesday, July 5, 2022

Latest Posts

ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ಹೊಸದಿಗಂತ ವರದಿ, ಶಿವವೊಗ್ಗ:

ಅತಿಥಿ ಉಪನ್ಯಾಸಕರ ಸೇವೆ ಮುಂದುವರೆಸುವಲ್ಲಿ ಕಾಲೇಜು ಶಿಕ್ಷಣ ಇಲಾಖೆ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರಿಗೆ ಸೇವೆ ಮುಂದುವರೆಸುವಂತೆ ಆದೇಶಿಸಿ ತಿಂಗಳುಗಳೇ ಕಳೆದರೂ ಕಾಲೇಜು ಶಿಕ್ಷಣ ಇಲಾಖೆ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದ 4 ತಿಂಗಳಿಂದ ಉಪನ್ಯಾಸಕರು ಉದ್ಯೋಗ ವೇತನವಿಲ್ಲದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಸಮಿತಿ ದೂರಿದೆ.
ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಾ.ಸೋಮಶೇಖರ್ ಶಿಮೊ ಗ್ಗಿ, ಡಾ.ಎಂ.ಸಿ. ನರಹರಿ, ಕೆ.ರಾಜೇಶ್ ಕುಮಾರ್, ಸರ್ವಜ್ಞ ಮೂರ್ತಿ, ಡಿಎಸ್‌ಎಸ್ ಮುಖಂಡ ಹಾಲೇಶಪ್ಪ, ಶಿವು ಮುಂತಾದವರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss