Saturday, July 2, 2022

Latest Posts

ಅತಿಯಾದ ಮೊಬೈಲ್ ಬಳಕೆ ಒಳ್ಳೆಯದಲ್ಲ ಎಂದ ತಾಯಿಯ ಬುದ್ಧಿಮಾತಿಗೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಅತಿಯಾದ ಮೊಬೈಲ್ ಬಳಕೆ ಒಳ್ಳೆಯದಲ್ಲ ಎಂದು ಬುದ್ದಿವಾದ ಹೇಳಿದ ಕಾರಣಕ್ಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿಯ ಗೋಕುಲನಗರದ ಸುಜೇತಾ (16) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕಿ.
ಈಕೆ ಸುರತ್ಕಲ್‌ನ ಖಾಸಗಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದಳು. ಮೊಬೈಲ್‌ನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದ ಹಿನ್ನೆಲೆಯಲ್ಲಿ ತಾಯಿ ಸೋಮವಾರ ಸಂಜೆ ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಬೇಸರಗೊಂಡ ಬಾಲಕಿ ಫ್ಯಾನ್‌ಗೆ ಸೀರೆ ಬಳಸಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿದ್ದ ತಾಯಿಯು ಟೆರೇಸ್ ಮೇಲೆ ತೆರಳಿ ವಾಪಸಾಗುವಷ್ಟರಲ್ಲಿ ಘಟನೆ ನಡೆದಿದೆ.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss