ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅತಿವೃಷ್ಟಿಗೆ ತಾತ್ಕಾಲಿಕ ಪರಿಹಾರ ಘೋಷಿಸಿ: ರೇವಣ್ಣ

ಹಾಸನ: ಮಲೆನಾಡಿನಲ್ಲಿ ಅತಿವೃಷ್ಟಿ ಯಿಂದಾಗಿ ಹಲವು ಸಮಸ್ಯೆಗಳು ತಲೆದೋರಿದ್ದು,ತಾತ್ಕಾಲಿಕವಾಗಿ ಜಿಲ್ಲೆಗೆ ಕೂಡಲೇ ಕನಿಷ್ಠ 2 ಕೋಟಿ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಈ ಕೂಡಲೇ ಸಕಾ೯ರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
ಇದೇ ರೀತಿ ಮಳೆ ಮುಂದುವರೆದರೆ 2 ದಿನದಲ್ಲಿ ಹೇಮಾವತಿ ಜಲಾಶಯ ತುಂಬಲಿದ್ದು, ಈ ವೇಳೆಗಾಗಲೇ ನಾಲೆಗಳ ದುರಸ್ತಿ ಮಾಡಬೇಕಿತ್ತು, ಆದರೆ ಯಾವುದೇ ಕೆಲಸ ಆಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇಂದಿನಿಂದಲೇ ಹೇಮಾವತಿ ಅಚ್ಚುಕಟ್ಟು ನಾಲೆಗಳಿಗೆ ನೀರು ಬಿಡಲು ಒತ್ತಾಯಿಸಿದ ಅವರು,
ನೀರಾವರಿ ಇಲಾಖೆಯಲ್ಲಿ ಬಿಲ್ ಪಾಸ್ ಮಾಡಲು ಆರೂವರೆ ಪರ್ಸೆಂಟೇಜ್ ಲಂಚ ಕೊಡಬೇಕು. ಇದು ಲೂಟಿಕೋರರ‌ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಯಾವುದೇ ಸೌಲಭ್ಯ ನೀಡಲಾಗುತ್ತಿಲ್ಲ ಎಂದು ಆರೋಪಿಸಿದ ರೇವಣ್ಣ,
ಕೊರೊನಾ ಹೆಸರಲ್ಲಿ ದುಡ್ಡು, ಬಿಲ್ ನಲ್ಲಿ ಹಣ ಹೊಡೆಯುವುದು ಇವರ ಸಾಧನೆ ಎಂದರು
ವರ್ಷದಲ್ಲಿ 120 ದಿನ ಅಧಿವೇಶನ ನಡೆಯಬೇಕು.ಆದರೆ ಕೊರೊನಾ ನೆಪದಲ್ಲಿ ಅಧಿವೇಶನ ನಡೆಸಲು ಸರ್ಕಾರ ಹಿಂದೇಟು ಹಾಕುತ್ತಿದೆ.ಹಾಗಾಗೀ ಈ ಕೂಡಲೇ ವಿಧಾನಸಭೆ ಅಧಿವೇಶನ ಕರೆಯುವಂತೆ ಸ್ಪೀಕರ್ ಗೆ ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss