ಶಿವಮೊಗ್ಗ: ಧಾರವಾಡದಲ್ಲಿ ನಡೆದಿರುವ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಆತ್ಮಹತ್ಯೆ ಪ್ರಕರಣ ಹಾಗೂ ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ಸಾರ್ವಜನಿಕರ ಆಸ್ತಿ, ಪೊಲೀಸ್ ಠಾಣೆಯನ್ನೂ ದ್ವಂಸ ಗೊಳಿಸಿ ದಾಂಧಲೆ ಮಾಡಿದ ಗೂಂಡಾಗಳನ್ನು ಕೂಡಲೇ ಅವರ ಮೇಲೆ ಕಠಿಣ ಕಾನೂನು ಕ್ರಮ ಹಾಗೂ ಶಿಕ್ಷೆಗೆ ಒಳಪಡಿಸಬೇಕು ಎಂದು ಶಿವಮೊಗ್ಗ ನಗರ ಬಿಜೆಪಿ ಸಮಿತಿ ವತಿಯಿಂದ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳಿಗೆ ಮೂಲಕ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕರಾದ ಎಸ್ ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆಯ ಉಪ ಪೌರರಾದ ಸುರೇಖಾ ಮುರುಳಿಧರ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಜಗದೀಶ್ , ಮಹಾನಗರ ಪಾಲಿಕೆ ಮಹಾ ಪೌರರಾದ ಸುವರ್ಣ ಶಂಕರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ರೆಡ್ಡಿ, ಕಾರ್ಯದರ್ಶಿಗಳಾದ ದೀನದಯಾಳು, ನಗರ ಯುವ ಮೋರ್ಚಾ ಅಧ್ಯಕ್ಷರಾದ ದರ್ಶನ್ ಆರ್. ವಿ, ಜಗನ್ನಾಥ್ ಟಿ ಆರ್, ಪಾಲಿಕೆಯ ಸದಸ್ಯರು, ನಗರ ಸಮಿತಿಯ ಪದಾಧಿಕಾರಿಗಳು, ಮಹಿಳಾ ಮೋರ್ಚಾದ ಸದಸ್ಯರು, ಯುವ ಮೋರ್ಚಾದ ಸದಸ್ಯರು ಉಪಸ್ಥಿತರಿದ್ದರು.