spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ: ನೂತನ ಕೆಪಿಸಿಸಿ ಕಚೇರಿಯಲ್ಲಿ ವಿಶೇಷ ಪೂಜೆ

- Advertisement -Nitte

ಬೆಂಗಳೂರು: ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ವಹಿಸುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಕೆಪಿಸಿಸಿಯ ನೂತನ ಕಚೇರಿಯ ಸಭಾಂಗಣದಲ್ಲಿ ಪೂಜೆ ನೆರವೇರಿತು.
ಕೆಪಿಸಿಸಿ ನೂತನ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 2 ವರ್ಷದಿಂದ ನೂತನ ಕಟ್ಟಡ ಕಾಮಗಾರಿ ಸ್ಥಗಿತವಾಗಿದ್ದು ಈಗ ಪೂರ್ಣವಾಗಿದೆ. ಈ ರಾಜ್ಯಕ್ಕೆ, ಪಕ್ಷದ ನಾಯಕರು, ಕಾರ್ಯಕರ್ತರಿಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿದ್ದು ಎಲ್ಲಾ ವಿಘ್ನಗಳ ನಿವಾರಣೆಗೆ ಶುಭ ಮೂಹೂರ್ತದಲ್ಲಿ ಪೂಜೆ ಆರಂಭಿಸಲಾಗಿದೆ. ರಾಜ್ಯ ಬೇಗನೇ ಕೊರೊನಾದಿಂದ ಮುಕ್ತವಾಗಲಿ ಎಂದರು.
ಪೂಜೆಯ ಬಳಿಕ ಡಿಕೆಶಿ ಮತ್ತು ಅವರ ಕುಟುಂಬಸ್ಥರು ಅರುಣಾಚಲೇಶ್ವರನ ದರ್ಶನ ಪಡೆಯಲಿದ್ದು ಇಂದು ಸಂಜೆ 5 ಗಂಟೆಗೆ ತಿರುವಣ್ಣಾಮಲೈಗೆ ತೆರಳಿ ನಾಳೆ ಬೆಳಗ್ಗೆ ಬೆಂಗಳೂರಿಗೆ ವಾಪಾಸ್‌ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss