ಅನಂತ್ ಅಂಬಾನಿ ಪ್ರೀ ವೆಡ್ಡಿಂಗ್‌ ಸೆಲೆಬ್ರೇಷನ್‌ ಗೆ ಬಾಲಿವುಡ್ ದಂಡು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖೇಶ್ ಅಂಬಾನಿ (Mukesh Ambani), ನೀತಾ ಅಂಬಾನಿ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಪ್ರೀ ವೆಡ್ಡಿಂಗ್ ಸೆಲೆಬ್ರೇಷನ್‌ಗೆ ಅದ್ಧೂರಿಯಾಗಿ ತಯಾರಿ ನಡೆಯುತ್ತಿದೆ. ಅಂಬಾನಿ ಕುಟುಂಬ ಮದುವೆಗೆ ಬಾಲಿವುಡ್ ಸ್ಟಾರ್ ಸೆಲೆಬ್ರಿಟಿಗಳ ದಂಡೇ ಹಾಜರಿ ಹಾಕಲಿದೆ.

ಅನಂತ್ ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ನಡೆಯಲಿದೆ.
ಗುಜರಾತ್‌ನ ಜಾಮ್ ನಗರ ಸಾಕ್ಷಿಯಾಗಲಿದೆ. ಅನಂತ್ ಪ್ರೀ ವೆಡ್ಡಿಂಗ್ ಮದುವೆ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ಇರಲಿದೆ. ಖ್ಯಾತ ಗಾಯಕ ಬಿ ಪ್ರಾಕ್‌ ಅವರ ಗಾಯನ ಇರಲಿದೆ.

ಅನಂತ್ ಅಂಬಾನಿ ಮನೆಯ ಕಾರ್ಯಕ್ರಮದಲ್ಲಿ ಸ್ಟಾರ್ ಸೆಲೆಬ್ರಿಟಿಗಳ ದಂಡೇ ಇರಲಿದೆ. ಅಮಿತಾಭ್ ಬಚ್ಚನ್, ಶಾರುಖ್ ಖಾನ್, ಸಲ್ಮಾನ್ ಖಾನ್, ಆಮೀರ್ ಖಾನ್, ರಜನಿಕಾಂತ್, ರಣ್‌ಬೀರ್ ಕಪೂರ್, ಆಲಿಯಾ ಭಟ್ (Aliaa Bhat), ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ (Deepika Padukone) ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ.

ವಿಶೇಷ ಆಹ್ವಾನಿತರಷ್ಟೇ ಈ ಮದುವೆ ಸಂಭ್ರಮದಲ್ಲಿ ಭಾಗಿಯಾಗಲಿದ್ದು, ಸುಮಾರು 1000 ಗಣ್ಯರು ಭಾಗಿಯಾಲಿದ್ದಾರೆ. ಮೈಕ್ರೋಸಾಪ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ಮೆಲಿಂಡಾ ಗೇಟ್ಸ್, ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಹಲವರು ಆಗಮಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!