Monday, August 15, 2022

Latest Posts

ಅನೇಕ ಜಿಲ್ಲೆಗಳ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯೇ ಕೊಟ್ಟಿಲ್ಲ: ದಿನೇಶ್ ಗುಂಡೂರಾವ್ ಆರೋಪ

ಮಂಗಳೂರು: ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಕಣ್ಣೀರು ಹಾಕುತ್ತಿದ್ದಾರೆ. ಆದರೆ ಅನೇಕ ಜಿಲ್ಲೆಗಳ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯೇ ಕೊಟ್ಟಿಲ್ಲ ಎಂದು  ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಕಣ್ಣೀರು ಹಾಕುತ್ತಿದ್ದಾರೆ. ಆದರೆ ಅನೇಕ ಜಿಲ್ಲೆಗಳ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯೇ ಕೊಟ್ಟಿಲ್ಲ. ಕೇವಲ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಮಾತ್ರಕ್ಕೆ ಪ್ರವಾಹ ಪೀಡಿತರ ಸಂಕಷ್ಟ ನಿವಾರಣೆಯಾಗುವುದೆ? ಸಂತ್ರಸ್ತರ ಗೋಳು ಕೇಳದ ಮೇಲೆ ಉಸ್ತುವಾರಿಯಾದರೂ ಇವರಿಗ್ಯಾಕೆ? ಎಂದು ಟೀಕೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss