Friday, January 22, 2021

Latest Posts

ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ನಳಿನ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದಕ್ಸಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿರುವ ಗುರುಪುರ ಸೇತುವೆ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​ ನೆರವಾಗಿದ್ದು, ಈ ಮೂಲಕ ಮಾನವೀಯತೆ ತೋರಿದ್ದಾರೆ.
ಗುರುಪುರ ಸೇತುವೆ ಬಳಿ ಬೈಕ್ ಸ್ಕಿಡ್ ಆಗಿ ಯುವತಿವೋರ್ವಳು ಬಿದ್ದು, ಗಾಯಗೊಂಡಿದ್ದಳು. ಈ ಸಂದರ್ಭ ಅದೇ ದಾರಿಯಲ್ಲಿ ಕಂದಾವರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಅವರು, ತಕ್ಷಣ ಕಾರಿನಿಂದ ಇಳಿದು ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಗಾಯಾಳು ಯುವತಿಯ ತಲೆ ಮತ್ತು ಹಣೆಗೆ ಪೆಟ್ಟಾಗಿತ್ತು. ಕೂಡಲೇ ಅವರು ಆಟೋರಿಕ್ಷಾವೊಂದರಲ್ಲಿ ಆಕೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಇದೀಗ ನಳಿನ್ ಕುಮಾರ್ ಕಟೀಲ್​​ ಅವರ ಈ ಮಾನವೀಯ ಕಾರ್ಯದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!