Tuesday, August 9, 2022

Latest Posts

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ: ಮೂವರ ಸಾವು

ದಾವಣಗೆರೆ: ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ರೊಪ್ಪದಹಟ್ಟಿ ಕ್ರಾಸ್ ಬಳಿ ನಡೆದಿದೆ.
ರೊಪ್ಪದಹಟ್ಟಿ ನಿವಾಸಿಗಳಾದ ಇದಾಯತ್ ಉಲ್ಲಾ(21), ರಂಗಪ್ಪ (45) ಹಾಗೂ ಮಹಮದ್ ಸೈಫುಲ್ಲಾ(45) ಅಪಘಾತದಲ್ಲಿ ಮೃತಪಟ್ಟವರು. ಗಾರೆ ಕೆಲಸ ಮಾಡುತ್ತಿದ್ದ ಮೂವರೂ ಚನ್ನಗಿರಿಯಿಂದ ರೊಪ್ಪದಹಟ್ಟಿ ಗ್ರಾಮಕ್ಕೆ ಬೈಕ್‌ನಲ್ಲಿ ಮರಳುತ್ತಿದ್ದಾಗ ಅಪರಿಚಿತ ವಾಹನವು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss