Wednesday, August 10, 2022

Latest Posts

ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳ: ಹಲವು ಹೆಂಡಿರ ಗಂಡನ ಸೆರೆ

ಪುತ್ತೂರು: ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿ ಹಲವು ಹೆಂಡಿರ ಗಂಡ ಇಷ್ಟೊಂದು ಹೆಂಡಂದಿರು ಇದ್ದರೂ ಕೊನೆಯ ಪತ್ನಿಯ ಪುತ್ರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ನಡೆಸಿದ ಘಟನೆ ನಡೆದಿದೆ. ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಕೊನೆಯ ಪತ್ನಿಯು ಪುತ್ತೂರು ನಗರ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದರು. ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಬಾಲಕಿ ಅಪ್ರಾಪ್ತ ವಯಸ್ಕಳಾದ ಹಿನ್ನೆಲೆಯಲ್ಲಿ ಆರೋಪಿಯ ಹೆಸರನ್ನು ಪೋಕ್ಸೋ ಕಾಯ್ದೆ ಅನ್ವಯ ಬಹಿರಂಗ ಪಡಿಸುವಂತಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss