ಹೊಸದಿಗಂತ ವರದಿ ಮಡಿಕೇರಿ:
ಅಪ್ರಾಪ್ತ ವಯಸ್ಸಿನ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆದಮುಳ್ಳೂರು ಗ್ರಾಮದ ನಿಸಾರ್ ಎಂಬಾತ ಬಂಧಿತ ಆರೋಪಿ.ಗುರುವಾರ ಪೂರ್ವಾಹ್ನ 11.30ರ ಸುಮಾರಿಗೆ ಕೆದಮುಳ್ಳೂರು ಗ್ರಾಮದಲ್ಲಿ ಹಸಿಮೀನು ಮಾರಾಟ ಮಾಡಿಕೊಂಡು ಬಂದ ನಿಸಾರ್, ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದನೆಂದು ಆಕೆಯ ಪೋಷಕರು ವೀರಾಜಪೇಟೆ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಹಾಗೂ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿದ್ದಾರೆ.
ವೀರಾಜಪೇಟೆಯ ಎರಡನೇ ಅಪರ ಅಡಿಷನಲ್ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯವು ಆರೋಪಿಯನ್ನು 15ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡುವಂತೆ ಆದೇಶಿಸಿದೆ.