ಹೊಸ ದಿಗಂತ ವರದಿ, ವಿಜಯಪುರ:
ಜಿಲ್ಲೆಯ ತಾಳಿಕೋಟೆ ತಾಲೂಕು ವ್ಯಾಪ್ತಿಯಲ್ಲಿ ಅಪ್ರಾಪ್ತ ಬುದ್ದಿಮಾಂಧ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರುದ್ರಗೌಡ ಹಣಮಂತ್ರಾಯ ಬಿರಾದಾರ (55) ಬಂಧಿತ ಆರೋಪಿ.
ಆರೋಪಿ ರುದ್ರಗೌಡ ಬಿರಾದಾರ ಈತನು, ಅಪ್ರಾಪ್ತ ಬುದ್ದಿಮಾಂಧ್ಯ ಬಾಲಕಿ, ಬಹಿರ್ದೆಸೆಗೆ ಹೋಗಿದ್ದ ವೇಳೆ, ಅವಳನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.