Monday, August 15, 2022

Latest Posts

ಅಫ್ಗಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 12 ಸಾವು

ಕಾಬೂಲ್: ಅಫ್ಗಾನಿಸ್ತಾನದ ದಕ್ಷಿಣ ಭಾಗದಲ್ಲಿ ಮಿಲಿಟರಿ ಚೆಕ್‌ಪಾಯಿಂಟ್ ಬಳಿ ಆತ್ಮಾಹುತಿ ಕಾರು ಬಾಂಬ್ ದಾಳಿ ನಡೆದಿದೆ.
ಆತ್ಮಾಹುತಿ ಕಾರು ಬಾಂಬ್ ದಾಳಿಯಲ್ಲಿ ಕನಿಷ್ಠ ಹನ್ನೆರಡು ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ನಾಲ್ವರು ನಾಗರಿಕರೂ ಇದ್ದಾರೆ. ನಹ್ರಿ ಸಾರಾ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಈ ಘಟನೆಯಲ್ಲಿ ಭದ್ರತಾ ಪಡೆಯ ಮೂವರು ಸಿಬ್ಬಂದಿ ಹಾಗೂ ಮಗು ಗಾಯಗೊಂಡಿದ್ದಾರೆ ಎಂದು ಹೆಲ್ಮಂಡ್ ಪ್ರಾಂತ್ಯದ ಗವರ್ನರ್ ಅವರ ವಕ್ತಾರ ಒಮರ್ ತಿಳಿಸಿದ್ದಾರೆ.
ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ. ಆದರೆ ಹೆಲ್ಮಂಡ್ ಪ್ರಾಂತ್ಯದ ಬಹುತೇಕ ಭಾಗ ತಾಲಿಬಾನ್ ಉಗ್ರರ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss