ಹೊಸದಿಗಂತ ವರದಿ,ಉಡುಪಿ:
ಜಿಲ್ಲೆಗೆ ಲಂಡನ್ ಸಹಿತ ವಿದೇಶದಿಂದ ವಾಪಸಾದ 36 ಮಂದಿಯನ್ನು ಪರೀಕ್ಷೆ ಒಳಪಡಿಸಿದ್ದೇವೆ. ಎಲ್ಲರ ಕೋವಿಡ್ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ರೂಪಾಂತರಿತ ಕೊರೋನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ವಿದೇಶದಿಂದ ಬಂದ ಎಲ್ಲರಿಗೂ 14 ದಿನಗಳ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅವರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದಾರೆ. ಕಾಯಿಲೆ ಲಕ್ಷಣಗಳು ಕಂಡು ಬಂದರೆ ಮತ್ತೊಮ್ಮೆ ಪರೀಕ್ಷೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಸದ್ಯಕ್ಕೆ ಉಡುಪಿ ಜಿಲ್ಲೆಯಲ್ಲಿ ರೂಪಾಂತರಿತ ಕೊರೋನಾ ವೈರಸ್ ಆತಂಕ ಇಲ್ಲ. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಮಾಸ್ಕ್ ಹಾಕದೇ ಓಡಾಡುವವರಿಗೆ ದಂಡ ಹಾಕಲಾಗುವುದು ಎಂದು ಡಿಸಿ ಜಗದೀಶ ಹೇಳಿದ್ದಾರೆ.