spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಭ್ಯರ್ಥಿಗಳ ಗೆಲ್ಲಿಸಲು ಅಕ್ರಮ ಹಣ: ಕೆಪಿಸಿಸಿ ವಕ್ತಾರ ಆರೋಪ

- Advertisement -Nitte

ಹೊಸ ದಿಗಂತ ವರದಿ, ಶಿವಮೊಗ್ಗ:

ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳು, ಸಂಸದರು, ಕ್ಷೇತ್ರದ ಶಾಸಕರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಅಕ್ರಮ ಹಣ ನೀಡಿದ್ದಾರೆ  ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಗಂಭೀರ ಆರೋಪ ಮಾಡಿದರು.
ಸಾಗರ  ತಾಲೂಕಿನ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿ ಮಾತನಾಡಿದ ಅವರು, ಒಬ್ಬೊಬ್ಬ ಗ್ರಾಮ ಪಂಚಾಯ್ತಿ ಸದಸ್ಯನಿಗೂ ನಿಗಧಿತ ಹಣ ನೀಡಿ ಮತ ಖರೀದಿಸುವ ಕೆಲಸ ಮಾಡಿದ್ದಾರೆ ಎಂದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇಂತಹ ಕೀಳುಮಟ್ಟಕ್ಕೆ ಇಳಿಯುವುದು ಒಳ್ಳೆಯ ಬೆಳವಣಿಗೆಯಲ್ಲ. ಇಂತಹ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಮಾಡಬಾರದು ಎಂದರು.
ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ಪಕ್ಷಗಳು ಪ್ರಧಾನ ಪಾತ್ರ ವಹಿಸುವುದಿಲ್ಲ. ನಮ್ಮ ಕಾರ್ಯಕರ್ತರು ಚುನಾವಣೆಗೆ ನಿಂತಿರುತ್ತಾರೆ. ಅವರನ್ನು ಗೆಲ್ಲಿಸಲು ನಾವು ಶಕ್ತಿಮೀರಿ ಪ್ರಯತ್ನ ಮಾಡಿದ್ದೇವೆ ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss