ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಖ್ಯಾತ ನಟ ಅಮಿತಾಬ್ ಬಚ್ಚನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಗುಡ್ ಬೈ’ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.
ಬಾಲಿವುಡ್ನ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ಟ್ವಿಟರ್ ಖಾತೆಯಲ್ಲಿ ಚಿತ್ರದ ಪೋಸ್ಟರ್ನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪೋಸ್ಟರ್ನಲ್ಲಿ ಬಚ್ಚನ್ ಗಾಳಿಪಟ ಹಾರಿಸುತ್ತಿದ್ದು, ರಶ್ಮಿಕಾ ಗಾಳಿಪಟದ ನೂಲಿನ ಬಂಡಲ್ನ್ನು ಹಿಡಿದಿರುವುದು ಕಾಣಬಹುದಾಗಿದೆ. ಇನ್ನು ಪೋಸ್ಟರ್ಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿವೆ. ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅವರ ಬಾಲಿವುಡ್ನ ಮೊದಲ ಚಿತ್ರ ಇದಾಗಿದ್ದು, ಮೊದಲ ಚಿತ್ರದಲ್ಲೇ ಬಿಗ್ ಬಿ ಜೊತೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.