ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಜೊತೆಗೆ ಅವರ ಪುತ್ರ ಅಭಿಷೇಕ್ ಬಚ್ಚನ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅಮಿತಾಭ್ ಬಚ್ಚನ್ ಅವರ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಪುತ್ರ ಅಭಿಷೇಕ್ ಬಚ್ಚನ್ ಟ್ವೀಟ್ ಮಾಡಿದ್ದಾರೆ. ಅವರು ಇನ್ನು ಮನೆಯಲ್ಲಿ ಇದ್ದು ವಿಶ್ರಾಂತಿ ಪಡೆಯಲಿದ್ದಾರೆ. ನಿಮ್ಮ ಪ್ರಾರ್ಥನೆ ಮತ್ತು ಹಾರೈಕೆಗಳಿಗೆ ‘ಧನ್ಯವಾದ ಎಂದು ಅಭಿಷೇಕ್ ಬಚ್ಚನ್ ಟ್ವೀಟರ್ ಮಾಡಿದ್ದಾರೆ.