Sunday, July 3, 2022

Latest Posts

ಅಮಿತ್‌ ಶಾ ಈಗ ಕೊರೊನಾ ಮುಕ್ತ: ಟ್ವೀಟ್ ಮೂಲಕ ಧನ್ಯವಾದ ಹೇಳಿದ ಕೇಂದ್ರ ಗೃಹ ಸಚಿವ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದಾರೆ.
ಕೋರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್‌‌‌ ಬಂದಿರುವುದಾಗಿ ಸ್ವತಃ ಅವರೇ ಟ್ವೀಟ್‌ ಮೂಲಕ ತಿಳಿಸಿದ್ದಾರೆ.
‘ಇಂದು ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ನೆಗೆಟಿವ್‌‌ ಬಂದಿದೆ. ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಮಯದಲ್ಲಿ ನನಗೆ ಮತ್ತು ನನ್ನ ಕುಟುಂಬಕ್ಕೆ ಶುಭ ಹಾರೈಸುವ ಮೂಲಕ ಆಶೀರ್ವದಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ವೈದ್ಯರ ಸಲಹೆಯ ಮೇರೆಗೆ ಇನ್ನೂ ಕೆಲವು ದಿನಗಳವರೆಗೆ ಮನೆಯಲ್ಲಿ ಕ್ವಾರಂಟೈನ್‌ನಲ್ಲಿ ಇರುತ್ತೇನೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss