ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಗೃಹ ಸಚಿವ ಅಮಿತ್ ಶಾ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುನ್ಸಿಪಲ್ ಕೌನ್ಸಿಲ್ ಹಣ ದುರುಪಯೋಗ ಮಾಡಿದೆ ಎಂದು ಆರೋಪಿಸಿ ಅಮಿತ್ ಶಾ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ರಾಘವ್ ಚಡ್ಡಾ, ಋತುರಾಜ್, ಕುಲದೀಪ್ ಕುಮಾರ್ ಮತ್ತು ಸಂಜೀವ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಎಎಪಿ ಟ್ವೀಟ್ ನಲ್ಲಿ ತಿಳಿಸಿದೆ.
ಹಾಗೆಯೇ ಎಎಪಿ ಈ ಬಗ್ಗೆ ಅಮಿತ್ ಶಾ ಮತ್ತು ಅವರ ಪೊಲೀಸರು ನಮ್ಮನ್ನು ಜೈಲಿಗೆ ಹಾಕಬಹುದು, ಆದರೆ ನಮ್ಮ ಇಚ್ಛಾಶಕ್ತಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದು ಹೇಳಿದೆ.
ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದ ಹೊರಗಡೆ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಆಮ್ ಆದ್ಮಿ ಪಕ್ಷದ ಮುಖಂಡ ರಾಘವ್ ಚಧಾ ಮಾಡಿದ ಮನವಿಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದರು.