ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಮೆರಿಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಕರ್ಫ್ಯೂ ಹಾಗೂ ಮತ್ತಷ್ಟು ನಿರ್ಬಂಧನೆಗಳನ್ನು ಜಾರಿಗೊಳಿಸಿರುವ ಬೆನ್ನಲ್ಲೇ ಮಾಲ್ ಗಳಲ್ಲಿ ಟಾಯ್ಲೆಟ್ ಪೇಪರ್ ಗಳ ಖರೀದಿ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.
ನ್ಯೂಯಾರ್ಕ್, ಕ್ಯಾಲಿಫೋರ್ನಿಯಾ ಸೇರಿದಂತೆ ಕೆಲವು ರಾಜ್ಯಗಳಿಗೆ ಅಮರಿಕ ಸರ್ಕಾರ ಕರ್ಫ್ಯೂ ಜಾರಿಗೊಳಿಸಿದ ಬೆನ್ನಲ್ಲೇ ಜನತೆ ತಮ್ಮ ದಿನ ನಿತ್ಯದ ಬಳಕೆ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ.
ಅಮೆರಿಕದ ಅತೀ ದೊಡ್ಡ ಸೂಪರ್ ಮಾರ್ಕೆಟ್ ಗಳಿಗೆ ಸಾಲುಗಟ್ಟಲೆ ಜನರು ಬಂದಿದ್ದು, ಟಾಯ್ಲೆಟ್ ಪೇಪರ್, ಔಷಧಿಗಳ ಖರೀದಿ ಮಾಡುತ್ತಿದ್ದು, ಸ್ಟಾಕ್ ಗಳು ಖಾಲಿಯಾಗುತ್ತಿವೆ ಎಂದು ವರದಿ ತಿಳಿಸಿದೆ.
ಆದರೆ ಸಾಮಾಜಿಕ ಮಾಧ್ಯಮದಲ್ಲಿ ಜನರು ಇತರ ಅವಳಿ ನಗರಗಳ ಅಂಗಡಿಗಳಲ್ಲಿ ಇದೇ ರೀತಿಯ ಸನ್ನಿವೇಶಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.