Tuesday, August 16, 2022

Latest Posts

ಅಮೆರಿಕದ 46ನೇ ಅಧ್ಯಕ್ಷನಾಗಿ ಆಯ್ಕೆ ಮಾಡಿರುವ ಮತದಾರರಿಗೆ ಧನ್ಯವಾದ ಅರ್ಪಿಸಿದ ಜೋ ಬಿಡೆನ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಮೆರಿಕದ 46ನೇ ಅಧ್ಯಕ್ಷರಾಗಿ ಡೆಮಾಕ್ರೆಟಿಕ್ ಪಕ್ಷದ ಜೋ ಬಿಡೆನ್ ಆಯ್ಕೆಯಾಗಿದ್ದಾರೆ. ತಮ್ಮನ್ನು ಆಯ್ಕೆ ಮಾಡಿದ ಮತದಾರರಿಗೆ ಧನ್ಯವಾದ ಅರ್ಪಿಸಿ ಅಮೆರಿಕವನ್ನು ಒಂದಾಗಿ ಮುನ್ನಡೆಸುವ ಅಧ್ಯಕ್ಷನಾಗಿ ಕೆಲಸ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೋ ಬಿಡೆನ್ ನನ್ನನ್ನು ಅಮೆರಿಕಾ ಅಧ್ಯಕ್ಷನಾಗಿ ಆಯ್ಕೆ ಮಾಡಿರುವ ಮತದಾರರಿಗೆ ಧನ್ಯವಾದಗಳು. ಪ್ರತಿಯೊಬ್ಬ ಅಮೆರಿಕನ್ ಪ್ರಜೆಗೂ ಆಭಾರಿಯಾಗಿದ್ದೇನೆ. ನಿಮ್ಮೆಲ್ಲರ ಸಹಕಾರದಿಂದ ನಾನು ಅಮೆರಿಕ ಎದುರಿಸುತ್ತಿರುವ ಜಾಗತಿಕ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸುವುದಾಗಿ ಅವರು ಹೇಳಿದ್ದಾರೆ.

ಅಧ್ಯಕ್ಷನಾಗಿ ಮಾಡುವ ಬಹಳಷ್ಟು ಕೆಲಸಗಳು ಕಾಯುತ್ತಿವೆ. ಎಲ್ಲರ ಸಹಕಾರದೊಂದಿಗೆ ಅಮೆರಿಕವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯುತ್ತೇನೆ. ನನ್ನ ಮೇಲೆ ಭರವಸೆ ಇಟ್ಟು ಮತ ಹಾಕಿರುವಿರಿ. ಅದನ್ನು ನಾನು ಎಂದಿಗೂ ಕಾಪಾಡಿಕೊಂಡು ಹೋಗುತ್ತೇನೆ ಎಂದು ಜೋ ಬಿಡೆನ್ ಭರವಸೆ ನೀಡಿದ್ದಾರೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss