Thursday, June 30, 2022

Latest Posts

ಅಮೆರಿಕಾದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಸೋಂಕಿಗೆ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ಹೊಸ ದಿಗಂತ ಆನ್ ಲೈನ ಡೆಸ್ಕ್:

ಅಮೆರಿಕಾದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚುತ್ತಲೇ ಇದೆ. ಈವರೆಗೆ 1 ಕೋಟಿಗೂ ಅಧಿಕ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿಗೆ ಬಲಿಯಾದವರ ಸಂಖ್ಯೆ 2.5 ಲಕ್ಷ ಗಡಿ ದಾಟಿದೆ.

ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಅಂಕಿ ಅಂಶಗಳ ಪ್ರಕಾರ ಬುಧವಾರದವರೆಗೆ ಅಮೆರಿಕಾದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರು  2,50,029 ಮಂದಿ. ಪ್ರತಿದಿನ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಅಮೆರಿಕದಲ್ಲಿ ವರದಿಯಾಗುತ್ತಿದ್ದು, ಸಾವಿರಕ್ಕೂ ಹೆಚ್ಚು ಜನ ಸೋಂಕಿನಿಂದ ಮೃತಪಡುತ್ತಿದ್ದಾರೆ.

ವಿಶ್ವದಾದ್ಯಂತ ಅತಿ ಹೆಚ್ಚು ಕೊರೋನಾ ಪ್ರಕರಣಗಳು ಹಾಗೂ ಸಾವುಗಳು ಅಮೆರಿಕಾದಲ್ಲಿ ವರದಿಯಾಗಿದೆ. ನಿಯೋಜಿತ ಅಮೆರಿಕಾ ಅಧ್ಯಕ್ಷ ಜೋ ಬೈಡನ್,  ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಪಾಡುವಂತೆ  ಒತ್ತಾಯಿಸುತ್ತಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss