ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಭಾರಿ ಕುತೂಹಲ ಮೂಡಿಸಿದ್ದು, ಪೆನ್ಸಿಲ್ವೇನಿಯಾ, ಜಾರ್ಜಿಯಾ, ನೆವಾಡ ಮತ್ತು ಅರಿಜೋನಾದಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ ಮುನ್ನಡೆ ಸಾಧಿಸಿದ್ದಾರೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾ ರಾಜ್ಯದ ಮತ ಎಣಿಕೆಯನ್ನು ಕೂಡಲೇ ನಿಲ್ಲಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಟ್ರಂಪ್ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ವರದಿಗಳ ಪ್ರಕಾರ ಜೊ ಬೈಡನ್ 264 ಎಲೆಕ್ಟೊರಲ್ ಮತಗಳನ್ನು ಗಳಿಸಿದ್ದರೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 214 ಎಲೆಕ್ಟೊರಲ್ ಮತಗಳನ್ನು ಪಡೆದಿದ್ದಾರೆ. ಅಮೆರಿಕದ ಆಡಳಿತ ಚುಕ್ಕಾಣಿಯನ್ನು ಯಾರು ಹಿಡಿಯುತ್ತಾರೆ ಎಂದು ಅಮೆರಿಕನ್ನರು ಸೇರಿದಂತೆ ಇಡೀ ವಿಶ್ವ ತೀವ್ರ ಕುತೂಹದಿಂದ ಕಾಯುತ್ತಾ ಕುಳಿತಿದೆ.