Tuesday, August 16, 2022

Latest Posts

ಅಮೆರಿಕ ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ; ಟ್ರಂಪ್ ಸಾಮಾಜಿಕ ಜಾಲತಾಣ ಖಾತೆಗಳು ಸ್ಥಗಿತ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಮೆರಿಕದ ವಾಷಿಂಗ್ಟನ್ ನಲ್ಲಿ ಟ್ರಂಪ್ ಬೆಂಬಲಿಗರು ಸಂಘರ್ಷ ನಡೆಸುತ್ತಿದ್ದು, ಸಂಘರ್ಷಕ್ಕೆ ಪ್ರೇರೇಪಿಸಿದ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣ ಖಾತೆಗಳನ್ನು 12 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ ಕುರಿತು ಸುಳ್ಳು ಆರೋಪ ಮಾಡುತ್ತಿರುವ ಹಿನ್ನೆಲೆ ಟ್ರಂಪ್ ಅವರ ಪ್ರಚೋದನಕಾರಿ ವಿಡಿಯೋಗಳನ್ನು ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ನಲ್ಲಿ ತೆಗೆದು ಹಾಕಲಾಗಿದೆ. ಈ ವೇಳೆ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಗಳನ್ನು ತಾತ್ಕಾಲಿಕ ಅಮಾನತು ಮಾಡಲಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ಮಧ್ಯೆ ಅಮೆರಿಕ ಕ್ಯಾಪಿಟಲ್‌ಗೆ ನುಗ್ಗಿದ ಡೊನಾಲ್ಡ್ ಟ್ರಂಪ್ ಅವರ ಸಾವಿರಾರು ಬೆಂಬಲಿಗರು ಪೊಲೀಸರ ವಿರುದ್ಧ ಘರ್ಷಣೆಯಲ್ಲಿ ಭಾಗಿಯಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss