spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಭೂಮಿ ಪೂಜೆ: ಕರ್ನಾಟಕದ 8 ಮಂದಿಗೆ ವಿಶೇಷ ಆಹ್ವಾನ!

- Advertisement -Nitte

ಉಡುಪಿ: ಧರ್ಮನಗರಿ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನಿಗೆ ಮಂದಿರ ನಿರ್ಮಿಸಲು ಭೂಮಿ ಪೂಜನಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಕರ್ನಾಟಕದ 8 ಮಂದಿಗೆ ಈ ಅಪೂರ್ವ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನ ಬಂದಿದೆ.
ತೀರ್ಥ ಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಠಾಧೀಶ ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಶೃಂಗೇರಿ ಮಠದ ಶ್ರೀವಿಧುಶೇಖರ ಭಾರತೀ ಸ್ವಾಮೀಜಿ, ಚಿತ್ರದುರ್ಗದ ಶ್ರೀಮಾದಾರ ಚೆನ್ನಯ್ಯ ಸ್ವಾಮೀಜಿ, ಸುತ್ತೂರು ಮಠಾಧೀಶ ಶ್ರೀಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಆರ್ಟ್ ಆಫ್ ಲಿವಿಂಗ್‌ನ ಶ್ರೀರವಿಶಂಕರ್ ಗುರೂಜಿ ಮತ್ತು ಇಸ್ಕಾನ್‌ನ ಮಧುಪಂಡಿತ ದಾಸ್ ಅವರು ವಿಶೇಷ ಆಹ್ವಾನಿತರಾಗಿದ್ದಾರೆ.
ಈ ಪೈಕಿ ಈಗಾಗಲೇ ಆದಿಚುಂಚನಗಿರಿ ಮಠಾಧೀಶ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅಯೋಧ್ಯೆಗೆ ತೆರಳಿದ್ದಾರೆ. ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಇಂದು (ಆ. 4) ಬೆಳಗ್ಗೆ ಅಯೋಧ್ಯೆಗೆ ತೆರಳಲಿದ್ದಾರೆ. ಅದೇ ರೀತಿ ಚಿತ್ರದುರ್ಗದ ಶ್ರೀಮಾದರ ಚೆನ್ನಯ್ಯ ಸ್ವಾಮೀಜಿ ಅವರು ಮಧ್ಯಾಹ್ನ ಹೊರಡಲಿದ್ದಾರೆ. ಸದ್ಯದ ಮಾಹಿತಿಯಂತೆ ರಾಜ್ಯದಿಂದ ಮೂವರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಉಳಿದ ಯತಿಗಳು ಮತ್ತು ಸಂತರು ಚಾತುರ್ಮಾಸ್ಯ ಸಹಿತ ನಾನಾ ಕಾರಣಗಳಿಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss