ಮೈಸೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮ ಆ.5ರಂದು ನಡೆಯುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಮೈಸೂರಿನಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈಸೂರು ನಗರದ ಹಲವು ಭಾಗಗಳಲ್ಲಿನ ಧಾರ್ಮಿಕ ಸ್ಥಳಗಳಲ್ಲಿ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದ್ದು. ಕೆಲವು ಸಂಘ,ಸAಸ್ಥೆಗಳು ಆಯ್ದ ವೃತ್ತಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿಯೂ ಕಾರ್ಯಕ್ರಮ ಏರ್ಪಡಿಸಿರುವ ಬಗ್ಗೆ ಮಾಹಿತಿ ಬಂದಿದೆ. ಮೈಸೂರು ನಗರವು ಈಗಾಗಲೇ ಕೋವಿಡ್-೧೯ ಸೋಂಕಿನಿoದ ಬಳಲುತ್ತಿದ್ದು, ಸುಮಾರು ಐದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ಪೂಜೆ ಮಾಡಿ, ಪ್ರಸಾದ ಮತ್ತು ಸಿಹಿ ಹಂಚುವುದರಿoದ ಸಾಂಕ್ರಾಮಿಕ ರೋಗವು ಮತ್ತಷ್ಡು ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ಸಲುವಾಗಿ ಹಾಗೂ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ ಆ.4ರ ಮಧ್ಯರಾತ್ರಿ 12ರಿಂದ ಬುಧವಾರ ಮಧ್ಯರಾತ್ರಿ ೧೨ಗಂಟೆಯವರೆಗೂ ಸಾರ್ವಜನಿಕ ಸ್ಥಳಗಳಲ್ಲಿ ಪೂಜಾ ಕಾರ್ಯಕ್ರಮಗಳು, ಸಭೆ ಸಮಾರಂಭಗಳು, ಮೆರವಣಿಗೆ, ಸಂಭ್ರಮಾಚರಣೆ, ಪಟಾಕಿ ಸಿಡಿಸುವುದು, ಧ್ವನಿವರ್ಧಕ ಬಳಸುವುದು, ಪ್ಲೆಕ್ಸ್ ಬ್ಯಾನರ್ ಎಲ್ ಇಡಿ, ಎಲ್ ಸಿಡಿ ಸ್ಕಿçÃನ್ ಇತ್ಯಾದಿಗಳನ್ನು ಅಳವಡಿಸಿ ಕಾರ್ಯಕ್ರಮ ಆಯೋಜಿಸುವುದನ್ನು ಮತ್ತು ಗುಂಪುಗೂಡುವಿಕೆಯನ್ನು ನಿರ್ಬಂಧಿಸಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ..
ಈ ವೇಳೆ ಬೇರೆ ರೀತಿಯ ಯಾವುದೇ ಧರಣಿ, ಪ್ರತಿಭಟನೆ, ಬೈಕ್ ರ್ಯಾಲಿಗಳನ್ನು ಸಹ ನಿಷೇಧಿಸಲಾಗಿದೆ. ಈ ಆದೇಶವು ದೇವಸ್ಥಾನಗಳಲ್ಲಿ ನಡೆಯುವ ದೈನಂದಿನ ಪೂಜಾ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ. ಯಾವುದೇ ದೇವಸ್ಥಾನಗಳ ಪೂಜಾ ಕಾರ್ಯಕ್ರಮಗಳಲ್ಲಿ ಒಮ್ಮೆಲೆ ಐವತ್ತು ಜನರು ಮೀರದಂತೆ ಮತ್ತು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸುವಂತೆ ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.