ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಇಂದು 12 ಜನರಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ ಶತಕ ದಾಟಿದ್ದು, 104 ಸಕ್ರಿಯ ಸೋಂಕಿತರು ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪತ್ತೆಯಾದ ಮೈಸೂರಿನ ಐದು ಪ್ರದೇಶಗಳನ್ನು ಇಂದು ಕಂಟೈನ್ ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದ್ದು, ಝೋನ್ ಗಳ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಗುಣವಾದ ನಾಲ್ವರನ್ನು ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಗಿದೆ