ಹಾಸನ: ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಹೀಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ತಮ್ಮ ಸಂಪರ್ಕದಲ್ಲಿರುವವರು ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಪರೀಕ್ಷೆಗೆ ಒಳಪಟ್ಟು, ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶೀಘ್ರವೇ ಗುಣಮುಖರಾಗಿ ಜನರ ಸೇವೆಗೆ ಮರಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.