ಬೆಂಗಳೂರು: ಕೊಡಗಿನಲ್ಲಿ ಗುಡ್ಡ ಕುಸಿದು ಅರ್ಚಕರ ಕುಟುಂಬ ನಾಪತ್ತೆಯಾಗಿದ್ದು, ಈ ಕುಟುಂಬ ಸುರಕ್ಷಿತವಾಗಿ ಮರಳಿ ಬರಲಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಗುಡ್ಡ ಕುಸಿದು ಬ್ರಹ್ಮಗಿರಿ ದೇವಸ್ಥಾನದ ಪ್ರಧಾನ ಅರ್ಚಕ ನಾರಾಯಣ ಆಚಾರ್ಯ ಕುಟುಂಬದ ಐವರು ನಾಪತ್ತೆಯಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
ನಾಪತ್ತೆಯಾದ ಐವರಿಗಾಗಿ ಎನ್ಡಿಆರ್ಎಫ್ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. ಅರ್ಚಕರ ಕುಟುಂಬ ಸುರಕ್ಷಿತವಾಗಿ ಮರಳಿ ಬರಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.