Wednesday, August 10, 2022

Latest Posts

ಅರ್ನಬ್ ಗೋಸ್ವಾಮಿ ಬಂಧನ ವಿರೋಧಿಸಿ ಪ್ರತಿಭಟನೆ: ಬಿಜೆಪಿ ನಾಯಕ ಕಪಿಲ್ ಮಿಶ್ರಾ ಬಂಧನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಲು ಯತ್ನಿಸಿದ್ದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಅವರನ್ನು ದೆಹಲಿಯ ರಾಜ್‌ಘಾಟ್‌ನ ಸಮೀಪ ಪೋಲೀಸರು ಬಂಧಿಸಿದ್ದಾರೆ.

ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕದ ಸಮೀಪ ಅರ್ನಾಬ್ ಗೋಸ್ವಾಮಿ ಅವರನ್ನು ಬೆಂಬಲಿಸಿ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಧರಣಿ ನಡೆಸಲು ಪ್ರಯತ್ನಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರನ್ನು ದೆಹಲಿಯ ರಾಜ್‌ಘಾಟ್‌ನ ಸಮೀಪ ರಾಜೇಂದರ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯದು ಬಂಧಿಸಲಾಯಿತು.

ಇದು ದೇಶದಲ್ಲಿ ಒಬ್ಬ ಪತ್ರಕರ್ತನನ್ನ ಮಾತ್ರ ಬಂಧಿಸಲಾಗಿಲ್ಲ ಸರ್ಕಾರವನ್ನು ಪ್ರಶ್ನಿಸಿದ ಕಾರಣ ಅವರ ಕುಟುಂಬ ಸದಸ್ಯರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಮಹಾರಾಷ್ಟ್ರ ಸರ್ಕಾರ ಮಾಡಿದ ಗೋಸ್ವಾಮಿ ವಿರುದ್ಧದ ಈ ದೌರ್ಜನ್ಯಕ್ಕೆ ನಮ್ಮ ವಿರೋಧವಿದೆ’ಎಂದು ಮಿಶ್ರಾ  ಅವರು ಹೇಳಿದರು.

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss