Sunday, July 3, 2022

Latest Posts

ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಿ: ಬ್ಯಾಂಕ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಸಾಲ ನೀಡಲು ಬ್ಯಾಂಕ್ ಗಳು ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬ್ಯಾಂಕ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂದಿದ್ದಾರೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಬ್ಯಾಂಕುಗಳು ವಿಳಂಬ ಮಾಡುತ್ತಿರುವುದರಿಂದ ಕರ್ನಾಟಕ ಈ ಯೋಜನೆಗಳಲ್ಲಿ ಹೆಚ್ಚಿನ ಪ್ರಗತಿ ತೋರಿಸುತ್ತಿಲ್ಲ ಎಂದರು.
ಈ ಹಿನ್ನೆಲೆ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆರಾಜ್ಯದ ವಿವಿಧ ಬ್ಯಾಂಕ್ ಗಳ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಈ ಎರಡೂ ಯೋಜನೆಗಳ ಪ್ರಗತಿ ಕುಂಠಿತವಾಗಿದೆ. ಈ ಯೋಜನೆಗಳಡಿ ಸಾಲ ಮಂಜೂರಾತಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಆದ್ಯ ಗಮನ ಹರಿಸುವಂತೆ ಬ್ಯಾಂಕರುಗಳಿಗೆ ಮುಖ್ಯಮಂತ್ರಿಗಳು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss