ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದ ಸಾಧಕರಾಗಿರುವ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ರಾಜ್ಯ ಸರಕಾರ ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ದೇರಳಕಟ್ಟೆಯ ವಿದ್ಯಾರತ್ನ ವಿದ್ಯಾಸಂಸ್ಥೆಯ ಸ್ಥಾಪಕರೂ ಆಗಿರುವ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ, ಬಿಜೆಪಿ ಮಂಡಲ ಪ್ರಮುಖ ನಾಯಕರಾಗಿದ್ದು, ರೋಟರಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.
ಅಲೆಮಾರಿ ಅಭಿವೃದ್ಧಿ ನಿಗಮವು ಬೃಹತ್ ನಿಗಮಗಳಲ್ಲಿ ಒಂದಾಗಿದ್ದು, ಸುಮಾರು ೪೨ಸಮುದಾಯಗಳ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ನೇಮಕಗೊಂಡ ನಿಗಮವಾಗಿದೆ. ನಿಗಮದ ಕೇಂದ್ರ ಕಚೇರಿಯು ಬೆಂಗಳೂರಿನಲ್ಲಿದೆ.