ಮಡಿಕೇರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮುಸ್ಲಿಂ, ಕ್ರೈಸ್ತ, ಸಿಖ್ ಬೌದ್ಧ, ಜೈನ ಸಮುದಾಯಕ್ಕೆ ಸೇರಿದ 1 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಒಂದು ಸಾವಿರ ರೂ.ಗಳಿಂದ 5,700 ರೂ.ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಪಿಯುಸಿಯಿಂದ ಪಿಎಚ್ ಡಿ ವರೆಗಿನ ವಿದ್ಯಾರ್ಥಿಗಳಿಗೆ 5 ಸಾವಿರ ರೂ.ಗಳಿಂದ 15 ಸಾವಿರ ರೂ.ವರೆಗೆ, ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿ ಮತ್ತು ಶಿಷ್ಯವೇತನದಂತೆ ಮಾಸಿಕ 5 ಸಾವಿರ ರೂ.ಗಳನ್ನು 4 ವರ್ಷದಗಳವರೆಗೆ ಶಿಷ್ಯವೇತನ ನೀಡಲಾಗುತ್ತದೆ.
ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನದಡಿಯಲ್ಲಿ 5 ಸಾವಿರ ರೂ.ಗಳಿಂದ 25 ಸಾವಿರ ರೂ. ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಪಿಯುಸಿಯಿಂದ ಪಿಎಚ್ ಡಿ ವರೆಗಿನ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯವನ್ನೂ ನೀಡಲಾಗುತ್ತಿದೆ.
ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 2 ವರ್ಷಗಳ ಪದವಿಗೆ ಗರಿಷ್ಠ 20 ಲಕ್ಷ ರೂ. ಸಹಾಯಧನವನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತಿದೆ. ಮೆಟ್ರಿಕ್ ಪೂರ್ವ ಮತ್ತು ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನದಡಿಯಲ್ಲಿ ಜೈನ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಶುಲ್ಕ ವಿನಾಯಿತಿ ಯೋಜನೆಯಡಿಯಲ್ಲಿ ಎಸ್.ಎಸ್.ಎಲ್.ಸಿ ನಂತರದ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ಭರಿಸಲಾಗುತ್ತದೆ.
ವಿದ್ಯಾಸಿರಿ ಯೋಜನೆಯಲ್ಲಿ ಮಾಸಿಕ 1500 ರೂ.ಗಳಂತೆ 10 ತಿಂಗಳಿಗೆ 15 ಸಾವಿರ ರೂ.ಗಳನ್ನು (ಎಸ್.ಎಸ್.ಎಲ್.ಸಿ ನಂತರದ ವಿದ್ಯಾರ್ಥಿಗಳಿಗೆ) ನೀಡಲಾಗುತ್ತಿದೆ. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.90 ಅಥವಾ 95ಕ್ಕಿಂತ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ಅಲ್ಪಸಂಖ್ಯಾತರ ಐ.ಟಿ.ಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಮಾಸಿಕ 150 ರೂ. ಗಳಂತೆ ತರಬೇತಿ ಭತ್ಯೆ ನೀಡಲಾಗುತ್ತದೆ.
ಎಂ.ಫಿಲ್ ಹಾಗೂ ಪಿಎಚ್ ಡಿ ವಿದ್ಯಾರ್ಥಿಗಳಿಗೆ ಮಾಸಿಕ 25 ಸಾವಿರ ರೂ. ಹಾಗೂ ವಾರ್ಷಿಕ 10 ಸಾವಿರ ರೂ.ಗಳನ್ನು ನಿರ್ವಹಣಾ ವೆಚ್ಚ ಸಹಾಯಧನ ನೀಡಲಾಗುವುದು. ಐಐಟಿ, ಎನ್.ಐ.ಟಿ., ಐ.ಐ.ಎಂ.ಎಸ್, ಐ.ಎಲ್.ಯು ನಂತಹ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಗರಿಷ್ಠ 2 ಲಕ್ಷ ಸಹಾಯಧನ ನೀಡಲಾಗುತ್ತದೆ.
ಜಿ.ಎನ್.ಎಂ, ಬಿಎಸ್ಸಿ ನರ್ಸಿಂಗ್ ಮತ್ತು ಪ್ಯಾರಮೆಡಿಕಲ್ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 35 ಸಾವಿರ ರೂ. ಶಿಷ್ಯವೇತನ ನೀಡಲಾಗುತ್ತದೆ. ಡಿ.ಎಡ್ ಮತ್ತು ಬಿ.ಎಡ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ 25 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದು.
ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಪತ್ರಿಕೋದ್ಯಮ ಮತ್ತು ಸಂವಹನ ತರಬೇತಿಗೆ ಮಾಸಿಕ 10 ಸಾವಿರ ರೂ. ಸಹಾಯಧನ ಯೋಜನೆ 3 ತಿಂಗಳಿನಿಂದ 1 ವರ್ಷದವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ.
ಕೆ.ಎ.ಎಸ್, ಯು.ಪಿ.ಎಸ್.ಸಿ, ಬ್ಯಾಂಕಿಂಗ್ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ಕೌಶಲ್ಯ ತರಬೇತಿ ಯೋಜನೆಯಲ್ಲಿ ವಿವಿಧ ಕೋರ್ಸುಗಳಲ್ಲಿ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಜಾದ್ ಭವನ, ಗ್ರಾಮೀಣ ಪೊಲೀಸ್ ಠಾಣೆ ಹತ್ತಿರ, ಮಡಿಕೇರಿ, ಪೋನ್ ನಂಬರ್ 08272-220214, 225528 ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.